ಬೆಳ್ಳಾರೆ ಶ್ರೀ ಕ್ಷೇತ್ರ ಗೌರಿಪುರಂನಲ್ಲಿ ತಾಂಬೂಲ ಪ್ರಶ್ನೆ

0

ಕೆಲವು ದಿನಗಳ ಹಿಂದೆ ಶಿಲಾನ್ಯಾಸಗೊಂಡು ಗರ್ಭಗುಡಿ ನಿರ್ಮಾಣದ ಕಾರ್ಯ ನಡೆಯುತ್ತಿರುವ ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಿಯ ಸನ್ನಿಧಿಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆ ಜ. 12ರಂದು ದೈವಜ್ಞರಾದ ತಂಬನ್ ಪಣಿಕ್ಕರ್ ರವರ ನೇತೃತ್ವದಲ್ಲಿ ನಡೆಯುತ್ತಿದೆ.


ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ, ಪದಾಧಿಕಾರಿಗಳು ಮತ್ತು ಸದಸ್ಯರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಕೆ, ಪದಾಧಿಕಾರಿಗಳು ಮತ್ತು ಸದಸ್ಯರು ಸೇರಿದಂತೆ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.