ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ ಆಚರಣೆ

0

ಸ್ವಾಮಿ ವಿವೇಕಾನಂದರು ಭಾರತದ ದಿವ್ಯ ಸಂಸ್ಕ್ರತಿಯ ಹರಿಕಾರ-ಪ್ರೊ. ಉದಯಕೃಷ್ಣ ಬಿ.

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ರಾಷ್ಟೀಯ ಯುವ ಸಪ್ತಾಹದ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ. ಬಿ ಉದ್ಘಾಟಿಸಿ, ಸ್ವಾಮಿ ವಿವೇಕಾನಂದರು ಜಗತ್ತು ಕಂಡಂತಹ ಮಹಾನ್ ಚಿಂತಕ, ವಾಗ್ಮಿ ಮತ್ತು ಭಾರತದ ದಿವ್ಯ ಸಂಸ್ಕ್ರತಿಯನ್ನು ಜಗತ್ತಿಗೆ ಸಾರಿ ಹೇಳಿದ ಹರಿಕಾರ ಎಂದು ಹೇಳಿದರು.

ವೇದಿಕೆಯಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಜಯರಾಮ್ ವೈ, ವಿದ್ಯಾರ್ಥಿಕ್ಷೇಮಾಧಿಕಾರಿ ಟೀನಾ ಹೆಚ್.ಎಸ್. ಉಪಸ್ಥಿತರಿದ್ದರು. ಕಾರ್‍ಯಕ್ರಮದಲ್ಲಿ ಕಾಲೇಜಿನ ಬೋದಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಸಮೀಕ್ಷಾ ಕೆ.ವಿ. ಮತ್ತು ವನ್ಯಶ್ರಿ ಕೆ.ಎಚ್ ಪ್ರಾರ್ಥಿಸಿ, ವಿದ್ಯಾರ್ಥಿನಿ ಚಂದನ ಪಿ.ಎಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಜೀವಿತ್ ಕೆ.ಪಿ ವಂದಿಸಿದರು.