ನೆಹರು ಮೆಮೋರಿಯಲ್ ಕಾಲೇಜು: ಸ್ವಾಮಿ ವಿವೇಕಾನಂದರ ಜನ್ಮದಿನ ಆಚರಣೆ

0


ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ಇವರು ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಎಂ ಬಾಲಚಂದ್ರ ಗೌಡ ಇವರು ಸ್ವಾಮಿ ವಿವೇಕಾನಂದರ ಬಗ್ಗೆ ಮಾತನಾಡಿ, ಅವರ ಆದರ್ಶಗಳನ್ನು ಇಂದಿನ ಯುವಜನತೆ ಮೈಗೂಡಿಸಿಕೊಂಡರೆ ರಾಷ್ಟ್ರ ನಿರ್ಮಾಣ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನೆಹರು ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಮಿಥಾಲಿ ಪಿ ರೈ ಹಾಗೂ ಉಪನ್ಯಾಸಕರು ಕಾರ್‍ಯಕ್ರಮದಲ್ಲಿ ಭಾಗವಹಿಸಿದ್ದರು.