ಸುಬ್ರಹ್ಮಣ್ಯ: ಕಿರುಷಷ್ಠಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

0

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿಯವರಿಂದ ಚಾಲನೆ

    ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಧಾರ್ಮಿಕ ಉಪನ್ಯಾಸ ಉದ್ಘಾಟನೆಯು ಜ.12 ರಂದು ನಡೆಯಿತು.    

 ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 





ಈ ಸಂದರ್ಭದಲ್ಲಿ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾl ನಿಂಗಯ್ಯ ,ವ್ಯವಸ್ಥಾಪನ ಸಮಿತಿಯ ಸದಸ್ಯರುಗಳಾದ ಪಿಜಿಎಸ್ ಎನ್ ಪ್ರಸಾದ್, ಮನೋಹರ ರೈ, ಲೋಕೇಶ್ ಮುಂಡೋಕಜೆ, ಶ್ರೀವತ್ಸ, ವನಜ ವಿ ಭಟ್ ಹಾಗೂ ಶೋಭಾ ಗಿರಿಧರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತದನಂತರ ಕುಮಾರಿ ವೈಷ್ಣವಿ ಕಿಶೋರ್ ಬೆಂಗಳೂರು ಇವರಿಂದ ಭರತನಾಟ್ಯ ಕಾರ್ಯಕ್ರಮ, ಪ್ರಕಾಶ್ ಮಲ್ಪೆ ಸಾರಥ್ಯದಲ್ಲಿ ಉತ್ತಿಷ್ಠ ಭಾರತ ಗೀತ ಕಥನ ಕಾರ್ಯಕ್ರಮ ,ಹಾಗೂ ವೈಷ್ಣವಿ ನಾಟ್ಯಾಲಯ ಪುತ್ತೂರು ಇಲ್ಲಿಯ ನಿರ್ದೇಶಕಿ ಯೋಗೀಶ್ವರಿ ಜಯಪ್ರಕಾಶ್ ಇವರ ಶಿಷ್ಯ  ನಿತ್ಯಾರ್ಪಣಂ ನಡೆಯಿತು.