ಆಲೆಟ್ಟಿ ಪಂಜಿಮಲೆ ವಿಷ್ಣುಮೂರ್ತಿ ದೈವದ ಒತ್ತೆಕೋಲ ಸಮಿತಿಯ ಪೂರ್ವ ಭಾವಿ ಸಭೆ

0

ಆಲೆಟ್ಟಿ ಪಂಜಿಮಲೆ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಪೂರ್ವ ಭಾವಿ ಸಭೆಯು ಸಮಿತಿಯ ಅಧ್ಯಕ್ಷ ಸುಧಾಕರ ಆಲೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜ.15 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.
ಫೆ.19 ರಂದು ಕೂಡಿ ಮರುದಿನ ದೈವದ ಅಗ್ನಿ ಸೇವೆಯು ನಡೆಯಲಿದೆ. ಇದರ ಪೂರ್ವ ಭಾವಿ ಸಿದ್ಧತೆಯ ಕುರಿತು ಚರ್ಚಿಸಲಾಯಿತು.


ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಬಯಲಾಟ ನಡೆಯಲಿದೆ. ರಾತ್ರಿ ಸಾರ್ವಜನಿಕ ಅನ್ನ ಸಂತರ್ಪಣೆಯ ವ್ಯವಸ್ಥೆ ಮಾಡುವುದಾಗಿ ತೀರ್ಮಾನಿಸಲಾಯಿತು.


ವೇದಿಕೆಯಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ, ಶ್ರೀಪತಿ ಬೈಪಡಿತ್ತಾಯ,ನಿಕಟ ಪೂರ್ವ ಕಾರ್ಯದರ್ಶಿ ಕೃಪಾಶಂಕರ ತುದಿಯಡ್ಕ ಉಪಸ್ಥಿತರಿದ್ದರು.


ಸಮಿತಿ ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.