ಪೆರುವಾಜೆ ಜಾತ್ರೋತ್ಸವ : ಉಗ್ರಾಣ ಮುಹೂರ್ತ

0

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವವು ನಡೆಯಲಿದ್ದು ಇಂದು ಉಗ್ರಾಣ ಮುಹೂರ್ತ ನಡೆಯಿತು.
ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು.
ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ ದೀಪ ಬೆಳಗಿಸಿ ಶುಭಹಾರೈಸಿದರು.


ಈ ಸಂದರ್ಭದಲ್ಲಿ ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಸಮಿತಿ ಸದಸ್ಯರಾದ ಪಿ. ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ, ದಾಮೋದರ ನಾಯ್ಕ, ನಾರಾಯಣ ಕೊಂಡೆಪ್ಪಾಡಿ, ಜಗನ್ನಾಥ ರೈ, ಭಾಗ್ಯಲಕ್ಷ್ಮಿ, ಯಶೋದ ಎ,ಎಸ್.ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.