ಉಬರಡ್ಕದಲ್ಲಿ ಉಚಿತ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕ ವಿತರಣೆ

0

ರೋಟರಿ ಕ್ಲಬ್ ಸುಳ್ಯ ಸಿಟಿ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಗ್ರಾಮ ಪಂಚಾಯತ್ ಉಬರಡ್ಕ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಬರಡ್ಕ, ತಾಲೂಕು ಸಾರ್ವಜನಿಕ ಆಸ್ಪತ್ರೆ ಸುಳ್ಯ, ದ. ಕ ಜಿಲ್ಲಾ ಅಂದತ್ವ ನಿವಾರಣ ಸಂಸ್ಥೆ ಮಂಗಳೂರು, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉಬರಡ್ಕ ಗ್ರಾಮ ಹಾಗೂ ಉಬರಡ್ಕದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕ ವಿತರಣೆ ಕಾರ್ಯಕ್ರಮ ಜ.16 ರಂದು ಉಬರಡ್ಕದ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ನಡೆಯಿತು.

ಶ್ರೀಮತಿ ಅಕ್ಷತರವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಿಬಿರದ ಸಂಯೋಜಕ ಹಾಗೂ ಉಬರಡ್ಕಗ್ರಾಮ ಪಂಚಾಯತ್ ಸದಸ್ಯ ಹರೀಶ್ ಉಬರಡ್ಕ ಸ್ವಾಗತಿಸಿದರು.

ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು ಇದರ ಮುಖ್ಯಸ್ಥೆ ಡಾ| ಗೌರಿ ಪೈ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ರೊ| ಗಿರೀಶ್ ನಾರ್ಕೋಡುರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದ. ಕ ಜಿಲ್ಲಾ ಅಂದತ್ವ ನಿವಾರಣ ಸಂಸ್ಥೆಯ ನೇತ್ರಾಧಿಕಾರಿ ರೊ| ಶಾಂತರಾಜ್ ಕಣ್ಣಿನ ಪರೀಕ್ಷೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಉಬರಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಪೂರ್ಣಿಮ ಸೂಂತೋಡು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಬರಡ್ಕ ಇದರ ಕಾರ್ಯನಿರ್ವಹಣಾಧಿಕಾರಿ ಜಯ ಪ್ರಕಾಶ್ ಹಾಗೂ ಉಬರಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಚಿತ್ರಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು, ರೊ| ನವೀನ್ ಅಳಿಕೆ ವಂದಿಸಿದರು. ರೊ| ಶಿವಪ್ರಸಾದ ಕೆ. ವಿ ಕಾರ್ಯಕ್ರಮ ನಿರೂಪಿಸಿದರು.

ಸುಮಾರು 155 ಮಂದಿ ಕಣ್ಣಿನ ಪರೀಕ್ಷೆಗೆ ಒಳಪಟ್ಟು 124 ಮಂದಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು. ಹಾಗೂ 9 ಮಂದಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಸೂಚಿಸಲಾಯಿತು. ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉಬರಡ್ಕ ಗ್ರಾಮದ ವತಿಯಿಂದ ರಕ್ತದೊತ್ತಡ ಪರೀಕ್ಷೆ ಹಮ್ಮಿಕೊಳ್ಳಲಾಗಿತ್ತು. ಯುವಜನ ಸಂಯುಕ್ತ ಮಂಡಳಿಯ ಉಪಾಧ್ಯಕ್ಷ ವಿಜಯ ಕುಮಾರ ಉಬರಡ್ಕ, ಪಂಚಾತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ, ರೊ| ಹೇಮಂತ ಕಾಮತ್, ರೊ| ರಾಘೇಶ್, ವಿಜಯ ಕುಮಾರ ನಾರ್ಕೋಡು, ರಾಧಾಕೃಷ್ಣ ನಾರ್ಕೋಡು, ವಿದ್ಯಾದರ ಹರ್ಲಡ್ಕ ಹಾಗೂ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.