ರಾಜ್ಯಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್ – ದಿಯಾ ಡಿ.ಎಸ್. ಪ್ರಥಮ

0

ಯಾಮೊಟೋ ಶೋಟೋಕಾನ್ ಕರಾಟೆ ಅಸೋಸಿಯೇಶನ್ ಟ್ರಸ್ಟ್ ಮಂಗಳೂರು ಹಾಗೂ ರೋಟರಿ ಕ್ಲಬ್ ಲೊರೆಟೊ ಹಿಲ್ಸ್ ಬಂಟ್ವಾಳ, ರೋಟರಿ ಕ್ಲಬ್ ಸಿದ್ಧಕಟ್ಟೆ, ಫಲ್ಗುಣಿ ರೋಟರಿ ಕ್ಲಬ್, ಬಿ.ಸಿ.ರೋಡು ಸಿಟಿ ವತಿಯಿಂದ ಬಿ.ಸಿ.ರೋಡ್‌ನ ಸ್ಪರ್ಶ ಕಲಾಮಂದಿರದಲ್ಲಿ ಇತ್ತೀಚೆಗೆ ನಡೆದ ಎರಡನೇ ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್ 2024ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ದಿಯಾ ಡಿ.ಎಸ್. ಪ್ರಥಮ ಸ್ಥಾನ ಪಡೆದಿದ್ದಾರೆ.

ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಆರ್ಟ್ಸ್ ವತಿಯಿಂದ ಮಂಗಳೂರಿನ ಜೆಪ್ಪುವಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ ಕಟಾ ಮತ್ತು ಕುಮಿಟೆ ವಿಭಾಗದಲ್ಲೂ ದಿಯಾ ಡಿ.ಎಸ್. ಅವರು ಪ್ರಥಮ ಸ್ಥಾನಿಯಾಗಿದ್ದಾರೆ. ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಐದನೇ ತರಗತಿ ವಿದ್ಯಾರ್ಥಿನಿಯಾದ ದಿಯಾ ಡಿ.ಎಸ್., ಕಲ್ಮಕಾರು ದಬ್ಬಡ್ಕ ನಿವಾಸಿ ಸುರೇಶ್ ದಬ್ಬಡ್ಕ – ಜ್ಯೋತಿ ದಂಪತಿ ಪುತ್ರಿ.