ಜ. 21: ಆಲಂಕಾರಿನಲ್ಲಿ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್‌ ಸೊಸೈಟಿಯ 23 ನೇ ಶಾಖೆ ಉದ್ಘಾಟನೆ

0

ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 23ನೇ ನೂತನ ಆಲಂಕಾರು ಶಾಖೆಯ ಉದ್ಘಾಟನಾ ಸಮಾರಂಭವು ಜ. 21 ರಂದು ಪೂರ್ವಾಹ್ನ ಗಂಟೆ 10.30ಕ್ಕೆ ಜರಗಲಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಾಖಾ ಕಚೇರಿಯನ್ನು ಉದ್ಘಾಟಿಸಲಿದ್ದು,ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದು, ಉದ್ಯಮಿ ಜಿ. ಕೃಷ್ಣಪ್ಪ ರಾಮಕುಂಜ ಅವರು ಗಣಕೀಕರಣ ವ್ಯವಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಆಲಂಕಾರು ಗ್ರಾ.ಪಂ. ಅಧ್ಯಕ್ಷ ಸುಶೀಲಾ ಗೌಡ ಪ್ರಥಮ ಠೇವಣಿ ಪತ್ರ ಹಾಗೂ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪಾಲ ರಾವ್ ಕಜೆ ಪ್ರಥಮ ಉಳಿತಾಯ ಖಾತೆ ಪುಸ್ತಕ ವಿತರಿಸಲಿದ್ದಾರೆ. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು, ಕಡಬ ಸ್ಪಂದನಾ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಕೇಶವ ಗೌಡ ಅಮೈ ಹಾಗೂ ಆಲಂಕಾರು ಶ್ರೀದುರ್ಗಾ ಟವರ್ಸ್ನ ನ ಮಾಲಕ ರಾಧಾಕೃಷ್ಣ ರೈ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.