ಸುಳ್ಯದಲ್ಲಿ ಕಾನೂನು ವಿಶ್ವವಿದ್ಯಾನಿಲಯ ಮಟ್ಟದ ಕ್ರಾಸ್ ಕಂಟ್ರಿ ರೇಸ್ ಯಶಸ್ವಿ

0

26 ಕಾಲೇಜುಗಳ 227 ವಿದ್ಯಾರ್ಥಿಗಳು ಭಾಗಿ

ಸುಳ್ಯದಿಂದ ಮೇನಾಲ- ಮುಳ್ಯಕಜೆ, ಕಾತಮಂಗಲ, ಎನ್.ಎಂ.ಸಿ. ವರೆಗೆ 10 ಕಿ.ಮೀ. ಓಡಿದ ಸ್ಪರ್ಧಿಗಳು

ಸುಳ್ಯದ ಕೆ.ವಿ.ಜಿ. ಕಾನೂನು ಕಾಲೇಜಿನ ಆತಿಥ್ಯದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ವತಿಯಿಂದ ಅಂತ‌ರ್ ಕಾಲೇಜು ಮಹಿಳಾ ಮತ್ತು ಪುರುಷರ ಗುಡ್ಡಗಾಡು ಓಟ ಇಂದು ಬೆಳಿಗ್ಗೆ ಸುಳ್ಯದಲ್ಲಿ ನಡೆಯಿತು.


ಸುಳ್ಯದಲ್ಲಿ ಪ್ರಥಮ ಬಾರಿಗೆ ನಡೆದ ಕಾನೂನು ವಿಶ್ವವಿದ್ಯಾನಿಲಯ ಮಟ್ಟದ ಈ ಕ್ರಾಸ್ ಕಂಟ್ರಿ ರೇಸ್ ನಲ್ಲಿ ರಾಜ್ಯದ ವಿವಿಧೆಡೆಗಳ 26 ಕಾಲೇಜುಗಳಿಂದ 138 ಪುರುಷರು ಹಾಗೂ 89 ಮಹಿಳೆಯರು ಸೇರಿ ಒಟ್ಟು 227 ಮಂದಿ ಸ್ಪರ್ಧಿಗಳು ಭಾಗವಹಿಸಿದರು.


ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆದ ಈ ಸ್ಪರ್ಧೆ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಆರಂಭಗೊಂಡು ಕಾಂತಮಂಗಲ, ಮೇನಾಲ, ಮುಳ್ಯಕಜೆ, ಕಾಂತಮಂಗಲ ಮಾರ್ಗವಾಗಿ ಸಾಗಿ 10 ಕಿಲೋಮೀಟರ್ ದೂರ ಕ್ರಮಿಸಿ ಎನ್‌ಎಂಸಿ ಮೈದಾನದಲ್ಲಿ ಸಮಾಪನಗೊಂಡಿತು.

ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಷನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರು ಹಸಿರು ನಿಶಾನೆ ತೋರಿ ಪುರುಷರ ವಿಭಾಗದ ಸ್ಪರ್ಧೆಗೆ ಚಾಲನೆ ನೀಡಿದರು. ಕಾರ್ಯದರ್ಶಿ ಕೆ.ವಿ.ಹೇಮನಾಥ್ ಮಹಿಳಾ ವಿಭಾಗದ ಸ್ಪರ್ಧೆಗೆ ಚಾಲನೆ ನೀಡಿದರು. ಹುಬ್ಬಳ್ಳಿ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶಕ ಡಾ. ಖಾಲಿದ್ ಖಾನ್, ಕೆ.ವಿ.ಜಿ. ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಉದಯಕೃಷ್ಣ ಬಿ., ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ.ಲೀಲಾಧರ ಡಿ.ವಿ., ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಪ್ರೊ.ಎಂ.ಬಾಲಚಂದ್ರ ಗೌಡ, ರಾಧಾಕೃಷ್ಣ ಮಾಣಿಬೆಟ್ಟು, ಕಾನೂನು ಕಾಲೇಜಿನ ಸ್ಫೂಡೆಂಟ್ ವೆಲ್‌ಫೇ‌ರ್ ಆಫೀಸ‌ರ್ ಶ್ರೀಮತಿ ಟೀನಾ ಎಚ್.ಎಸ್, ಅಧೀಕ್ಷಕರಾದ ಗೋಪಿನಾಥ್ ಕೆ, ಕ್ರೀಡಾ ಸಂಯೋಜಕರಾದ ಲಕ್ಷ್ಮೀಕಾಂತ್ ಕೆ.ಎಲ್. ದೈಹಿಕ ಶಿಕ್ಷಣ ನಿರ್ದೇಶಕರಾದ ಲೆಫ್ಟಿನೆಂಟ್ ಸೀತಾರಾಮ ಎಂ.ಡಿ., ನಾಗರಾಜ್ ನಾಯ್ಕ, ಮಿಥನ್ ಎಸ್, ವಿವಿಧ ಕಾನೂನು ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರು, ವ್ಯವಸ್ಥಾಪಕರು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.