ಕಾಯರ್ತೋಡಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ ಗೊನೆ ಮುಹೂರ್ತ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವು ಜ. ೨೬ರಂದು ಆರಂಭಗೊಂಡು ಜ. ೨೮ರವರೆಗೆ ನಡೆಯಲಿರುವುದು. ಆ ಪ್ರಯುಕ್ತ ಗೊನೆಮುಹೂರ್ತವು ಪ್ರಧಾನ ಅರ್ಚಕ ನೀಲಕಂಠರವರ ನೇತೃತ್ವದಲ್ಲಿ ಇಂದು ನಡೆಯಿತು.


ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಚಂದ್ರಕಾಂತ ಎಂ.ಆರ್. ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷ ಕೃಷ್ಣ ಕಾಮತ್, ಕಾರ್ಯದರ್ಶಿ ಕುಸುಮಾಧರ ಎ.ಟಿ., ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ, ಸೇವಾ ಸಮಿತಿ ಸಂಚಾಲಕ ನವೀನ್ ಕುದ್ಪಾಜೆ, ದೇವಸ್ಥಾನದ ಮೆನೇಜರ್ ದೇವಿಪ್ರಸಾದ್ ಕುದ್ಪಾಜೆ, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರುಗಳು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.