ಐವರ್ನಾಡು – ದೇರಾಜೆ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಐವರ್ನಾಡಿನಲ್ಲಿ ಬೃಹತ್ ಪ್ರತಿಭಟನೆ

0

ಐವರ್ನಾಡು ದೇರಾಜೆ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು ಈ ರಸ್ತೆ ಕೂಡಲೇ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹಿಸಿ ಐವರ್ನಾಡು ಗ್ರಾ.ಪಂ.ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದೆ.

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ದ್ವಾರದಿಂದ ಪ್ರತಿಭಟನೆ ನಡೆಸುತ್ತಾ ಬಂದ ಪ್ರತಿಭಟನಕಾರರು ಜನಪ್ರತಿನಿಧಿಗಳಿಗೆ ಧಿಕ್ಕಾರ ಕೂಗಿದರು.
ಬಳಿಕ ಗ್ರಾ.ಪಂ.ಎದುರುಗಡೆ
ಪ್ರತಿಭಟನೆಯನ್ನುದ್ದೇಶಿಸಿ ಅಜಿತ್ ಐವರ್ನಾಡು ,ಅಶೋಕ್ ಎಡಮಲೆ,ನೆಕ್ರೆಪ್ಪಾಡಿ ಕೃಷ್ಣಪ್ಪ ಗೌಡರು ಮಾತನಾಡಿ ಧಾರ್ಮಿಕ ಸ್ಥಳಕ್ಕೆ ಹೋಗುವ ರಸ್ತೆ ತೀರಾ ಹೊಂಡ ಗುಂಡಿಗಳಿಂದ ಕೂಡಿದೆ.ಜನಪ್ರತಿನಿಧಿಗಳು,ಲಕ್ಷ,ಕೋಟಿಯ ಆಶ್ವಾಸನೆ ನೀಡಿದ್ದಾರೆ .ಆದರೆ ಇಲ್ಲಿಯವರೆಗೆ ಯಾವುದೇ ರೀತಿಯ ರಸ್ತೆ ಅಭಿವೃದ್ದಿ ಮಾಡಿಲ್ಲ ಎಂದು ಹೇಳಿದರು.
ಇವತ್ತಿನ ಪ್ರತಿಭಟನೆ ಕೇವಲ ಸಾಂಕೇತಿಕ ಮುಂದೆ ರಸ್ತೆ ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.


ಪ್ರತಿಭಟನೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದು ಪ್ರತಿಭಟನೆ ನಡೆಯುತ್ತಿದೆ.ನಾಗರಿಕ ಸೇವಾ ಸಮಿತಿ ಹಾಗೂ ಗ್ರಾಮದ ನಾಗರಿಕರು ಪಾಲ್ಗೊಂಡಿದ್ದಾರೆ.