ಜ.22ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಿ : ವಿ.ಹಿಂ.ಪ, ಬಜರಂಗದಳ ಮನವಿ

0

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಹಾಗೂ ಬಜರಂಗದಳ ಸುಳ್ಯ ನಗರದ ವತಿಯಿಂದ 22ರಂದು ನಡೆಯುವ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಕೊಡಬೇಕೆಂದು ಶಿಕ್ಷಣಾಧಿಕಾರಿಗಳಿಗೆ ಮನವಿ ಮಾಡಲಾಯಿತು.

ಈ ಸಂದರ್ಭ ವಿ.ಹೆಚ್.ಪಿ ಸುಳ್ಯ ಪ್ರಖಂಡ ಅಧ್ಯಕ್ಷರಾದ ಸೋಮಶೇಖರ್ ಪೈಕ,
ವಿ.ಹೆಚ್.ಪಿ ಸುಳ್ಯ ಪ್ರಖಂಡ ಕಾರ್ಯದರ್ಶಿ ನವೀನ್ ಎಲಿಮಲೆ, ಬಜರಂಗದಳ ಸುಳ್ಯ ನಗರ ಸಂಚಾಲಕ ವರ್ಷಿತ್ ಚೊಕ್ಕಾಡಿ, ಮಿಥುನ್ ಸುಳ್ಯ, ಕಿರಣ್ ಬೆಟ್ಟಂಪಾಡಿ ಉಪಸ್ಥಿತರಿದ್ದರು.