ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ: ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ

0

ಅಯೋಧ್ಯೆಯಲ್ಲಿ ಶ್ರೀಬಾಲರಾಮನ ಪ್ರತಿಷ್ಠೆ ನಡೆಯುವ ಹಿನ್ನೆಲೆಯಲ್ಲಿ ಇಂದು ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ರಾಮನಾಮ ಸಂಕೀರ್ತನೆ, ನೇರ ಪ್ರಸಾರದ ವಿಕ್ಷಣೆ, ಮಧ್ಯಾಹ್ನ ಶ್ರೀ ಮಂಜುನಾಥೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ ನಡೆಯಿತು.


ಅಯೋಧ್ಯಾ ಕರಸೇವೆಯಲ್ಲಿ ಭಾಗವಹಿಸಿ ಗ್ರಾಮಸ್ಥರನ್ನು‌ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ದೇವಸ್ಥಾನದ ಆಡಳಿತ ಧರ್ಮದರ್ಶಿ ಹಗಡೆ ಪರಮೇಶ್ವರಯ್ಯ ಕಾಂಚೋಡು ಸನ್ಮಾನಿಸಿದರು. ಬಾಳಿಲ, ಮುಪ್ಪೇರ್ಯ ಗ್ರಾಮಗಳ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.