ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆ

0

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಜ.22ರಂದು ಬೆಳಿಗ್ಗೆ ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಬ್ರಹ್ಮಶ್ರೀ ಪುರೋಹಿತ ನಾಗರಾಜ ಭಟ್ ಅವರ ನೇತೃತ್ವದಲ್ಲಿ ಶ್ರೀರಾಮ ತಾರಕ ತಾರಕ ಮಂತ್ರ ಜಪ ಯಜ್ಞ ಹಾಗೂ ಸಾರ್ವಜನಿಕ ಶನೇಶ್ವರ ಪೂಜೆಯು ನಡೆಯಿತು.

ಬೆಳಿಗ್ಗೆ ಶ್ರೀರಾಮ ತಾರಕ ಮಂತ್ರ ಜಪ ಯಜ್ಞ ಹಾಗೂ ಸಾರ್ವಜನಿಕ ಶನೇಶ್ವರ ಪೂಜೆ ನಡೆಯಿತು. ಮಧ್ಯಾಹ್ನ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ದೇವರಿಗೆ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿಮಂಡಳಿಯ ಅಧ್ಯಕ್ಷ ಶಿವರಾಮ ರೈ ಕುರಿಯ ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸೇವಾ ಸಮಿತಿಯ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು, ಭಜನಾ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.