ಜ.28ರಂದು ದುಗ್ಗಲಡ್ಕದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ವೈದ್ಯಕೀಯ ಶಿಬಿರ

0

ಲಯನ್ಸ್ ಕ್ಲಬ್ ಸುಳ್ಯ, ಭಾರತ ಸೇವಾ ದಳ ದ. ಕ. ಮಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಡಾ. ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.),ಸೆಂಚುರಿ ಗ್ರೂಪ್ಸ್ ಬೆಂಗಳೂರು,ಸುಳ್ಯ-ಪುತ್ತೂರು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳು ಕೂಟ ದುಗಲಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ವೈದ್ಯಕೀಯ ಶಿಬಿರ ಜ.28ರಂದು ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಪೂ.9ರಿಂದ 1ರವರೆಗೆ ನಡೆಯಲಿದೆ.


ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ,ಅಗತ್ಯವುಳ್ಳವರಿಗೆ ಕನ್ನಡಕವನ್ನು ಸಂಘಟಕರ ವತಿಯಿಂದ ಉಚಿತವಾಗಿ ನೀಡಲಾಗುವುದು.ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಲಾಗುವುದು.ನೇತ್ರದಾನ ಮಾಡಲಿಚ್ಚಿಸುವವರಿಗೆ ಅರ್ಜಿ ನೋಂದಾವಣೆಗೆ ಅವಕಾಶ ಕಲ್ಪಿಸಲಾಗುವುದು.

ತನ್ನ ಕಣ್ಣಿನ ಹಾಗೂ ಇತರ ಆರೋಗ್ಯ ಸಮಸ್ಯೆಯನ್ನು ತಪಾಸಣಾ ಸಮಯದಲ್ಲಿ ವೈದ್ಯರಿಗೆ ತಿಳಿಸತಕ್ಕದ್ದು. ಆರೋಗ್ಯ ತಪಾಸಣೆಯ ನಂತರ ಅವಶ್ಯವಿದ್ದಲ್ಲಿ ಉಚಿತವಾಗಿ ಔಷಧಿ ನೀಡಲಾಗುವುದು.