ಜನತಾ ದರ್ಶನದಲ್ಲಿ ಬಂದ ಅರ್ಜಿಗಳ ವಿಲೇವಾರಿಗೆ ಕಾಲ ಮಿತಿ ಯೋಜನೆ

0

ಜನತಾ ದರ್ಶನದಲ್ಲಿ ಬಂದ ಅರ್ಜಿಗಳ ವಿಲೇವಾರಿಗೆ ಕಾಲ ಮಿತಿ ಯೋಜನೆ ಹಾಕಿಕೊಂಡು ಸಮಸ್ಯೆಗೆ ಸ್ಪಂದಿಸಲಾಗುವುದು ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುಳ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ಬಳಿಕ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನತಾ ರ್ಶನದಲ್ಲಿ 407 ಅರ್ಜಿಗಳು ಬಂದಿತ್ತು. ಹೆಚ್ಚಾಗಿ ಅರಣ್ಯ ಭೂಮಿ ಸಮಸ್ಯೆ, ವನ್ ಟು ಫೈವ್ ಸಮಸ್ಯೆಗೆ ಸಂಬಂಧಿಸಿದ್ದು. ಇದರ ಇತ್ಯರ್ಥಕ್ಕಾಗಿ ಸರ್ವೆಗೆ ವಿಶೇಷ ತಂಡ ರಚನೆ ಮಾಡಲಾಗುವುದು. ಸುಳ್ಯ ಕ್ಷೇತ್ರದಲ್ಲಿ ಇಷ್ಟು ಸಮಸ್ಯೆಗಳಿದ್ದರೂ ಈವರೆಗೆ ಗಮನ ಹರಿಸಿಲ್ಲ ಎಂದೇ ಹೇಳಬೇಕಾಗಿದೆ. ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವ ನಿಟ್ಟಿನಲ್ಲೂ ಸರಕಾರದೊಂದಿಗೆ ಚರ್ಚೆ ನಡೆಸಲಾಗುವುದು.

ಇಲ್ಲಿ ನಾವು ಗೆದ್ದಿಲ್ಲ, ಕಾಂಗ್ರೆಸ್, ಬಿಜೆಪಿ ಭಾವನೆ ಬಿಟ್ಟು ಈ ಕ್ಷೇತ್ರದ ಕಡೆಗೆ ಹೆಚ್ಚಿನ ಗಮನ ಹರಿಸಲಾಗುವುದು ಎಂದರು.ಸರಕಾರಿ ಆಸ್ಪತ್ರೆಗಳಿಗೆ ತಂತ್ರಜ್ಞರ ನೇಮಕ ಶೀಘ್ರದಲ್ಲೇ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ಪ್ರೊ.ಕೆ.ಈ .ರಾಧಾಕೃಷ್ಣ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಂ, ಕಾಂಗ್ರೆಸ್ ಮುಖಂಡರಾದ ಧನಂಜಯ ಅಡ್ಪಂಗಾಯ, ಎಂ‌. ವೆಂಕಪ್ಪ ಗೌಡ, ಟಿ.ಎಂ.ಶಹೀದ್ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಗೆ ಆಗಮಿಸಿದ ಸಚಿವರನ್ನು ಅಧ್ಯಕ್ಷ ಹರೀಶ್ ಬಂಟ್ವಾಳ್ ಈ ಸಂದರ್ಭದಲ್ಲಿ ಸನ್ಮಾನಿಸಿದರು.