ಕಂದ್ರಪ್ಪಾಡಿ ಶಾಲಾ ಶತಮಾನೋತ್ಸವದ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ

0

ಜ.28ರಂದು ಕ್ರೀಡಾಕೂಟ

ಕಂದ್ರಪ್ಪಾಡಿ ಶಾಲಾ ಶತಮಾನೋತ್ಸವದ ಪ್ರಯುಕ್ತ ಸ.ಹಿ.ಪ್ರಾ.ಶಾಲೆ ಕಂದ್ರಪ್ಪಾಡಿ, ಶತಮಾನೋತ್ಸವ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘ ಇವುಗಳ ಆಶ್ರಯದಲ್ಲಿ ಶಾಲಾ ಶತಮಾನೋತ್ಸವ ಕ್ರೀಡಾಕೂಟ ಕಾರ್ಯಕ್ರಮ ಗಳು ಜ.28ರಂದು ನಡೆಯಲಿದೆ.‌

ಶತಮಾನೋತ್ಸವ ಕಾರ್ಯಕ್ರಮ ದ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ಜ.21ರಂದು ನಡೆಯಿತು. ಇದೇ ಸಂದರ್ಭದಲ್ಲಿ ಶಾಲಾ ಅಂಗಣಕ್ಕೆ ಗುದ್ದಲಿಪೂಜೆ ಕಾರ್ಯಕ್ರಮ ವು ನಡೆಯಿತು.


ಶಾಲಾ ಶತಮಾನೋತ್ಸವದ ಪ್ರಯುಕ್ತ ಶಾಲೆಯಲ್ಲಿ ಅನೇಕ‌ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಇದನ್ನು ಇದೇ ದಿನ ಸುಳ್ಯ ಶಾಸಕಿ ಭಾಗೀರಥಿ‌ ಮುರುಳ್ಯರವರು ವೀಕ್ಷಿಸಿದರು. ಹಾಗೂ ಶಾಲಾ ಅಂಗಣಕ್ಕೆ ಇಂಟಾರ್ ಲಾಕ್ ಅಳವಡಿಸಲು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಎ.ವಿ.ತೀರ್ಥರಾಮ, ದೇವಚಳ್ಳ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಪಂಚಾಯತ್ ಸದಸ್ಯ ಭವಾನಿಶಂಕರ ಮುಂಡೋಡಿ, ದೇವಚಳ್ಳ ಗ್ರಾ.ಪಂ.ಮಾಜಿ ಅಧ್ಯಕ್ಷ ದಿವಾಕರ ಮುಂಡೋಡಿ, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ‌ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು, ಗುತ್ತಿಗಾರು ಪಂಚಾಯತ್ ಸದಸ್ಯ ವೆಂಕಟ್ ವಳಲಂಬೆ, ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಎಪಿಎಂಸಿ. ಮಾಜಿ ಅಧ್ಯಕ್ಷ ವಿನಯ ಕುಮಾರ್ ಮುಳುಗಾಡು, ವೆಂಕಟರಮಣ ಸೊಸೈಟಿ‌ ಅಧ್ಯಕ್ಷ ಪಿ.ಸಿ.ಜಯರಾಮ, ಕೆನಡಾದ ಉದ್ಯಮಿ ಉಮೇಶ್ ಮುಂಡೋಡಿ, ಕಂದ್ರಪ್ಪಾಡಿ ಶ್ರೀ ರಾಜ್ಯ ದೈವ ಮತ್ತು ಪುರುಷ ದೈವ ಇದರ ಆಡಳಿತ ಮಂಡಳಿ ಅಧ್ಯಕ್ಷ ಕಾಳಿಕಾ ಪ್ರಸಾದ್ ಮುಂಡೋಡಿ ಹಾಗೂ ಎಸ್.ಡಿ.ಎಂ.ಸಿ.ಸದಸ್ಯರು, ಹಳೆ ವಿದ್ಯಾರ್ಥಿ ಗಳು, ಶಾಲಾಭಿಮಾನಿಗಳು ಉಪಸ್ಥಿತರಿದ್ದರು.

ಕ್ರಿಕೆಟ್ ಪಂದ್ಯಾಟದ ಅಧ್ಯಕ್ಷ ತೆಯನ್ನು ಲಿಂಗಪ್ಪ ಗೌಡ ಚಿತ್ತಡ್ಕ ವಹಿಸಿದ್ದರು.
ಕರ್ನಾಟಕ ವಿಕಾಸ ಬ್ಯಾಂಕ್ ನ ನಿವೃತ್ತ ಸೀನಿಯರ್ ಮ್ಯಾನೇಜರ್ ಗಿರಿಧರ ಅಂಬೆಕಲ್ಲು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಕ್ರೀಡಾ ಸಮಿತಿ ಸಂಚಾಲಕ ಜಯರಾಮ ಕಡ್ಲಾರು, ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಾಣಿ, ಗ್ರಾ.ಪಂ. ಸದಸ್ಯ ಭವಾನಿಶಂಕರ ಮುಂಡೋಡಿ, ಎಸ್.ಡಿ.ಎಂ.ಸಿ.‌ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಕೇಶ್ ರಾಜ ಹಿರಿಯಡ್ಕ ಉಪಸ್ಥಿತರಿದ್ದರು.