ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಪೂಜಾ ಕೈಂಕರ್ಯ

0

ಕೊಡಗು ಸಂಪಾಜೆಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಪ್ರಶ್ನಾಚಿಂತನೆಯಲ್ಲಿ ಕಂಡುಬಂದ ಪ್ರಕಾರ ವಿವಿಧ ಪೂಜಾ ಕಾರ್ಯಗಳು ಜ.24ರಂದು ನಡೆಯಿತು.

ಜ.24ರಂದು ಬೆಳಿಗ್ಗೆ ಮಹಾಗಣಪತಿ ಹವನ, ಸಂಜೆ ಅಘೋರ ಹೋಮ, ಪ್ರೇತ ಉಚ್ಛಾಟನೆ ಕಾರ್ಯ ನಡೆಯಿತು.
ಇಂದು ತಿಲ ಹೋಮ, ನಾರಾಯಣ ಬಲಿ, ದ್ವಾದಶ ಆರಾಧನೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ನೆರವೇರಲಿದೆ.
ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.