p>

ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಫೆಬ್ರವರಿ ತಿಂಗಳಲ್ಲಿ ಜರುಗಲಿದ್ದು, ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಜ.22ರಂದು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ರಜತ್ ಅಡ್ಕಾರು, ನ.ಸೀತಾರಾಮ, ಹಿರಿಯರಾದ ಉಪೇಂದ್ರ ಕಾಮತ್ ವಿನೋಬನಗರ ಸೇರಿದಂತೆ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಸದಸ್ಯರುಗಳು, ಉತ್ಸವ ಸಮಿತಿಯ ವಿವಿಧ ಪದಾಧಿಕಾರಿಗಳು , ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.