ಹಾಲೆಮಜಲು : ಶಾಲಾ ಶೌಚಾಲಯ ಕಾಮಗಾರಿ ಪ್ರಗತಿಯಲ್ಲಿ

0

ನಾಲ್ಕೂರು ಗ್ರಾಮದ ಹಾಲೆಮಜಲಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿ ಕಳೆದ ಕೆಲವು ಸಮಯಗಳಿಂದ ಶೌಚಾಲಯವಿಲ್ಲದೆ ಮಕ್ಕಳು ಭಾರಿ ತೊಂದರೆಯನ್ನು ಅನುಭವಿಸಿದ್ದರು. ಈ ಬಗ್ಗೆ ಪತ್ರಿಕೆಯಲ್ಲಿ ಕೂಡ ಹಲವು ಬಾರಿ ವರದಿಗಳು ಪ್ರಕಟಗೊಂಡಿತು. ಇದೀಗ ಗುತ್ತಿಗಾರು ಗ್ರಾಮ ಪಂಚಾಯಿತಿ ಅನುದಾನ ಸೇರಿದಂತೆ ಇನ್ನಿತರ ಮೂಲಗಳಿಂದ ಅನುದಾನಗಳನ್ನು ಸೇರಿಸಿಕೊಂಡು ಶೌಚಾಲಯದ ಕಾಮಗಾರಿ ನಡೆಯುತ್ತಿದ್ದು ಅದು ಪ್ರಗತಿಯಲ್ಲಿದೆ. (ಚಿತ್ರ: ವರದಿ ಡಿಎಚ್)