ಕನಕಮಜಲು ಸಹಕಾರಿ ಸಂಘದ ವಠಾರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

0

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಇದರ ಕನಕಮಜಲಿನ ಪ್ರಧಾನ ಕಛೇರಿ ವಠಾರದಲ್ಲಿ 75ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.

ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹರೀಶ್ ಮೂರ್ಜೆ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು. ಅಧ್ಯಕ್ಷ ನಾರಾಯಣ ಗೌಡ ಬೊಮ್ಮೆಟ್ಟಿ ಅವರು ಗಣರಾಜ್ಯೋತ್ಸವದ ಕುರಿತು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕರುಣಾಕರ ರೈ ಕುಕ್ಕಂದೂರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ, ಸಹಕಾರಿ ಸಂಘದ ನಿರ್ದೇಶಕರುಗಳು, ಮಾಜಿ ಅಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು, ಸಹಕಾರಿ ಸಂಘದ ಸಿಬ್ಬಂದಿ ವರ್ಗದವರು ಸೇರಿದಂತೆ ಕನಕಮಜಲು ಹಾಗೂ ಜಾಲ್ಸೂರು ಗ್ರಾಮಸ್ಥರು ಉಪಸ್ಥಿತರಿದ್ದರು.