ಕನಕಮಜಲು: ಗ್ರಾ.ಪಂ.ನಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕನಕಮಜಲು ಗ್ರಾಮ ಪಂಚಾಯತಿ ವಠಾರದಲ್ಲಿ 75ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.

ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಸದಸ್ಯರಾದ ಶ್ರೀಧರ ಕುತ್ಯಾಳ, ಇಬ್ರಾಹಿಂ ಕಾಸಿಂ, ಕನಕಮಜಲು ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಗೌಡ ಬೊಮ್ಮೆಟ್ಟಿ, ಕನಕಮಜಲಿನ ಶ್ರೀ ನರಿಯೂರು ರಾಮಣ್ಣ ಗೌಡ ಹಿ.ಪ್ರಾ.ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಹಮೀದ್ ಸುಣ್ಣಮೂಲೆ ಸೇರಿದಂತೆ ಗ್ರಾ.ಪಂ. ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.