ಸುಳ್ಯ ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ 75ನೇ ಗಣರಾಜ್ಯೋತ್ಸವ

0

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 75ನೇ ವರ್ಷದ ಗಣರಾಜ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ಸಾರಿದರು.

ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಕೌಂನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಚಂದ್ರಶೇಖರ ಪೇರಾಲ್, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ., ಸಂಸ್ಥೆಯ ಎನ್.ಎಸ್.ಎಸ್., ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಆರ್ತಿಕ್ ಕೆ. ಎಸ್., ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕು. ಶ್ರೀಜಾ ರೈ, ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.