ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು : ಗಣರಾಜ್ಯೋತ್ಸವ ಆಚರಣೆ

0

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ೭೫ನೇ ಗಣರಾಜ್ಯೋತ್ಸವ ಕಾರ್‍ಯಕ್ರಮವನ್ನು ಆಚರಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀ ಉದಯಶಂಕರ ಹೆಚ್ ಧ್ವಜಾರೋಹಣ ಗೈದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸತೀಶ್ ಕುಮಾರ್ ಕೆ ಆರ್ ರವರು ಗಣರಾಜ್ಯೋತ್ಸವದ ಕುರಿತಾಗಿ ಮಾತನಾಡಿ ಶುಭ ಹಾರೈಸಿದರು. ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.