








ಸಂಪಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.
ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಹಮ್ಮದ್ ಹನೀಫ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು, ಉಪಾಧ್ಯಕ್ಷ ಎಸ್.ಕೆ. ಹನೀಫ್, ಸದಸ್ಯರುಗಳಾದ ಜಿ.ಕೆ. ಹಮೀದ್, ಬಿ.ಎಸ್. ಯಮುನ, ಪ್ರೌಢಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಹೊನ್ನಪ್ಪ ಆಚಾರ್ಯ, ಎಸ್.ಡಿ.ಎಂ.ಸಿ. ಸದಸ್ಯರುಗಳು, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ
ಶ್ರೀಮತಿ ಜಯಶ್ರೀ ಎನ್.ಕೆ., ಪೋಷಕರು, ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









