ಗೂನಡ್ಕ ಸ.ಹಿ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ದ.ಕ. ಸಂಪಾಜೆ ಗ್ರಾಮದ ಗೂನಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.

ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಎಸ್.ಕೆ. ಹ‌ನೀಫ್ ಕಲ್ಲುಗುಂಡಿ, ಮೈಸೂರಿನ ಶಾನ್ ಗ್ಲೋಬಲ್ ಹ್ಯೂಮ್ಯುನಿಟಿ ಟ್ರಸ್ಟ್ ಅಧ್ಯಕ್ಷ ಸಂದೇಶ್, ಗ್ರಾ.ಪಂ. ಸದಸ್ಯೆ ಶ್ರೀಮತಿ ಅನುಪಮ, ದೊಡ್ಡಡ್ಕ ಶ್ರೀ ಕೊರಗಜ್ಜ ಸಾನಿಧ್ಯದ ಆಡಳಿತ ಮೊಕ್ತೇಸರ ಚಂದ್ರಶೇಖರ ಜಿ.ಕೆ. ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಭವಾನಿ ಸ್ವಾಗತಿಸಿ, ಸಹಶಿಕ್ಷಕ ಭವಾನಿಶಂಕರ ಕೆ.ಜಿ. ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಕು. ಪಲ್ಲವಿ ವಂದಿಸಿದರು.