ಗೂನಡ್ಕದ ತೆಕ್ಕಿಲ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ

0

ದ.ಕ. ಸಂಪಾಜೆ ಗ್ರಾಮದ ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಉನೈಸ್ ಪೆರಾಜೆಯವರು ಧ್ವಜಾರೋಹಣಗೈದು, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಸಂಪತ್ ಜೆ. ಡಿ. ಸ್ವಾಗತಿಸಿ, ಶ್ರೀಮತಿ ನೌಫಿಯ ವಂದಿಸಿದರು. ವಿದ್ಯಾರ್ಥಿಗಳಿಂದ ದೇಶ ಭಕ್ತಿಯನ್ನು ಸಾರುವ ಹಲವಾರು ಕಾರ್ಯಕ್ರಮಗಳು ಮೂಡಿ ಬಂದವು.