ಸ್ನೇಹ ಶಾಲೆಯಲ್ಲಿ ಬೋರ್ಡ್ ಪರೀಕ್ಷೆಯನ್ನು ಎದುರಿಸುವ ಕಲೆ ಮತ್ತು ಪರಿಣಾಮಕಾರಿ ಸಂವಹನ ತರಬೇತಿ ಕಾರ್ಯಾಗಾರ

0

ಸ್ನೇಹ ಶಿಕ್ಷಣ ಸಂಸ್ಥೆ ಸುಳ್ಯ ಮತ್ತು ಅಂಜಲಿ ಮೋಂಟೊಸ್ಸರಿ ಶಾಲೆ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯನ್ನು ಎದುರಿಸುವ ಕಲೆ ಮತ್ತು ಪರಿಣಾಮಕಾರಿ ಸಂವಹನ ತರಬೇತಿ ಕಾರ್ಯಾಗಾರ ಜ.25 ರಂದು ರಂದು ಸ್ನೇಹ ಶಾಲೆಯಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಅಂಜಲಿ ಮೋಂಟೊಸ್ಸರಿ ಶಾಲೆಯ
ಸಂಚಾಲಕಿ ಶ್ರೀಮತಿ ಗೀತಾಂಜಲಿ ಟಿ.ಜಿ. ಭಾಗವಹಿಸಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ಕಳೆದ ಎರಡು ವರ್ಷಗಳಿಂದ ಅಂಜಲಿ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನಿಂದ ಉಚಿತವಾಗಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಕಾರ್ಯಗಾರ ನಡೆಸಿಕೊಡುತ್ತಿದ್ದರು. ಈ ವರ್ಷ ತಾಲೂಕಿನ ಬೇರೆ ಬೇರೆ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ದೃಷ್ಟಿಯಿಂದ ಈ ಕಾರ್ಯಗಾರವನ್ನು ಹಮ್ಮಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾಗಿರುವ ಡಾ. ಚಂದ್ರಶೇಖರ ದಾಮ್ಲೆ, ಸಂಸ್ಥೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ, ಶಿಕ್ಷಕ ವೃಂದ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಕಾರ್ಯಗಾರದ ಪ್ರಯೋಜನವನ್ನು ಪಡೆದುಕೊಂಡರು.