ಕೊಡಗು ಸಂಪಾಜೆ : ಸ.ಹಿ.ಪ್ರಾ.ಶಾಲಾ ವಾರ್ಷಿಕೋತ್ಸವ ಮತ್ತು ಗಣರಾಜ್ಯೋತ್ಸವ ಆಚರಣೆ

0

ಕೊಡಗು ಸಂಪಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಮತ್ತು ಗಣರಾಜ್ಯೋತ್ಸವ ಆಚರಣೆಯು ಜ.26ರಂದು ನಡೆಯಿತು.

ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀಧರ್ ಪಿ.ಕೆ. ಅವರು ಧ್ವಜಾರೋಹಣ ನೆರವೇರಿಸಿ, ಅಧ್ಯಕ್ಷತೆ ವಹಿಸಿದ್ದರು. ಕೊ.ಸಂಪಾಜೆ ಪ.ಪೂ. ಕಾಲೇಜಿನ ಮುಖ್ಯೋಪಾಧ್ಯಾಯ ಐತ್ತಪ್ಪ ಅವರು ಮುಖ್ಯ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಕೊ.ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರಮಾದೇವಿ ಕಳಗಿ, ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಎ.ಬಿ., ಸದಸ್ಯ ಸುರೇಶ್ ಪಿ.ಎಲ್., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯಕುಮಾರ್ ಹೆಚ್.ಜೆ. ಸಂಪಾಜೆ ಕ್ಲಸ್ಟರ್ ಸಿ.ಆರ್.ಪಿ. ಶ್ರೀಮತಿ ರೇಖಾ ಯು.ಎಸ್., ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಾವಿತ್ರಿ ಪಿ.ಎ. ವೇದಿಕೆಯಲ್ಲಿ ಉಪಸ್ಥಿತರಿದ್ದರು.