ಕಾಂಗ್ರೆಸ್ ಬಿಎಲ್‌ಎ ಜಿಲ್ಲಾ ಉಸ್ತುವಾರಿಯಾಗಿ ಭರತ್ ಮುಂಡೋಡಿ ನೇಮಕ

0

ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬೂತ್ ಲೆವೆಲ್ ಏಜೆಂಟರ ನೇಮಕಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಲು, ನಿಗದಿತ ಸಮಯದೊಳಗೆ ಚುನಾವಣಾಧಿಕಾರಿಗಳಿಗೆ ಸಲ್ಲಿಸಲು ಹಾಗೂ ಕೆಪಿಸಿಸಿ, ಡಿಸಿಸಿ,ಬಿಸಿಸಿ ಮುಖಂಡರುಗಳೊಂದಿಗೆ ಸಮನ್ವಯತೆ ಸಾಧಿಸಲು ಬಿ.ಎಲ್.ಎ. ಸಮನ್ವಯ ಸಮಿತಿ ಹಾಗೂ ಬಿಎಲ್‌ಎ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್ ಅದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡಕ್ಕೆ ಬಿಎಲ್‌ಎ ಜಿಲ್ಲಾ ಉಸ್ತುವಾರಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಭರತ್ ಮುಂಡೋಡಿ ಅವರನ್ನು ನೇಮಕ ಮಾಡಲಾಗಿದೆ.

ಭರತ್ ಮುಂಡೋಡಿಯವರು ಸುಳ್ಯದ ಕಾಂಗ್ರೆಸ್ ಮುಖಂಡರಾಗಿದ್ದು ಈ ಹಿಂದೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇರಿದಂತೆ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.