
ಜ. 26ರಂದು ಕೆವಿಜಿ ಇಂಟೆರ್ ನ್ಯಾಷನಲ್ ಪಬ್ಲಿಕ್ ಶಾಲೆಯ 2023-24 ರ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿದಾಯ ಕೂಟವನ್ನು ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್, ಕಮಿಟಿ ‘ಬಿ’ ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ವಿದ್ಯಾರ್ಥಿ ಜೀವನದ ಹತ್ತನೇ ತರಗತಿಯ ಹಂತದಲ್ಲಿನ ಜವಾಬ್ದಾರಿಗಳ ಬಗ್ಗೆ ಹೇಳಿದರು. ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾದ ಪ್ರಮಾಣವಚನವನ್ನು ಭೋದಿಸಿದರು. ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲಿನ ಎಲ್ಲಾ ರೀತಿಯ ಅನುಭವಗಳನ್ನು ತಮ್ಮ ಮನಸ್ಸಿನ ಮಾತುಗಳಿಂದ ಹಂಚಿಕೊಂಡರು.















ಉಪಾಪ್ರಾಂಶುಪಾಲೆ ಶಿಲ್ಪಾ ಬಿದ್ದಪ್ಪ ಹಾಗೂ ಇತರ ಶಿಕ್ಷಕರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಕಿಯರ ಸುಮಧರವಾದ ವಿದಾಯಗೀತೆ, ವಿದ್ಯಾರ್ಥಿಗಳಿಗೆ ಮನೋರಂಜನಾ ಆಟಗಳು, ಕೇಕ್ ಕತ್ತರಿಸುವ ಕಾರ್ಯಕ್ರಮ ಹಾಗೂ ಸಹಭೋಜನದೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು. ಶಾಲಾ ಸಂಚಾಲಕರಾದ ಡಾ. ರೇಣುಕಾ ಪ್ರಸಾದ್ ಕೆ. ವಿ. ಹಾಗೂ ಜ್ಯೋತಿ ಆರ್. ಪ್ರಸಾದ್ ಹತ್ತನೇ ತರಗತಿಯ ವಿದ್ಯಾರ್ಥಿಗಳ ಮುಂಬರುವ ಪರೀಕ್ಷೆ ಹಾಗೂ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಭೌತಶಾಸ್ತ್ರ ಶಿಕ್ಷಕಿ ಚೈತ್ರ ಕಾರ್ಯಕ್ರಮ ನಿರೂಪಿಸಿದರು.









