ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ

0

ಜೀರ್ಣೋದ್ಧಾರ ಸಮಿತಿ‌ ಅಧ್ಯಕ್ಷರಾಗಿ ಸದಾನಂದ ಮಾವಜಿ ಆಯ್ಕೆ

ಮಂಡೆಕೋಲು ಗ್ರಾಮದ ಶ್ರೀ‌ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಸದಾನಂದ ಮಾವಜಿ ಆಯ್ಕೆಯಾಗಿದ್ದಾರೆ.

ಜ.28ರಂದು ದೇವಸ್ಥಾನದಲ್ಲಿ ನಡೆದ ಭಕ್ತರ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಸ್ಥಾನದ ವಿವಿಧ ಸಮಿತಿಯವರು ಈ ಸಂದರ್ಭದಲ್ಲಿ ‌ಇದ್ದರು.

ಜೀರ್ಣೋದ್ಧಾರ ಸಮಿತಿಯ ಖಜಾಂಚಿಯಾಗಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೇಶವ ಮೂರ್ತಿ ಹೆಬ್ಬಾರ್ ಕಾರ್ಯನಿರ್ವಹಿಸಲಿದ್ದಾರೆ. ಧಾರ್ಮಿಕ ದತ್ತಿಯ ನಿರ್ದೇಶನದಂತೆ, ಹಾಗೂ ಇನ್ನಿಬ್ಬರು ವ್ಯವಸ್ಥಾಪನ ಸಮಿತಿಯ ಸದಸ್ಯರು ಜೀರ್ಣೋದ್ದಾರ ಸಮಿತಿಯ ಸದಸ್ಯರಾಗಿರುತ್ತಾರೆ.