ಬೆಳ್ಳಾರೆ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಎಂಬಲ್ಲಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.1 ರಂದು ನಡೆದಿದೆ.
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮಿನ್ನು (68) ಎಂದು ಗುರುತಿಸಲಾಗಿದ್ದು ಮನೆಮಂದಿ ಕೆಲಸಕ್ಕೆ ತೆರಳಿದ ಬಳಿಕ ಇವರು ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಸುಮಾರು ಮೂರು ವರ್ಷಗಳಿಂದ ಅನಾರೋಗ್ಯದಿಂದಿದ್ದು ಈ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತರು 3 ಗಂಡು ಮಕ್ಕಳು ಮತ್ತು 3 ಹೆಣ್ಣು ಮಕ್ಕಳು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.