ಏನೆಕಲ್ಲು: ಇನ್ನರ್ ವೀಲ್ ಕ್ಲಬ್ ವತಿಯಿಂದ ಸ್ಟೀಲ್ ವಾಟರ್ ಬಾಟಲ್ ವಿತರಣೆ

0

ಸುಬ್ರಹ್ಮಣ್ಯದ ಇನ್ನರ್ ವೀಲ್ ಕ್ಲಬ್ ವತಿಯಿಂದ ಏನೆಕಲ್ಲು ಬಾನಡ್ಕ ಅಂಗನವಾಡಿ ಶಾಲಾ ಎಲ್ಲಾ ಮಕ್ಕಳಿಗೆ ಉಚಿತವಾಗಿ ಸ್ಟೀಲ್ ವಾಟರ್ ಬಾಟಲ್ ಗಳನ್ನು ಜ.27 ರಂದು ವಿತರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಮಣ್ಯ ಇನ್ನರ್ ವೀಲ್ ಕ್ಲಬ್ ಅದ್ಯಕ್ಷೆ ವೇದ ಶಿವರಾವ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರುಗಳಾದ ಶಿವರಾಮ ನೆಕ್ರಾಜೆ, ಭವ್ಯ, ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಪೂರ್ವ ಅಧ್ಯಕ್ಷ ಶಿವರಾಮ ಏನೆಕಲ್ಲು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ಬಿನ ಸದಸ್ಯರುಗಳಾದ ಶ್ರೀಜಾ ಚಂದ್ರಶೇಖರ್ ನಾಯರ್ ,ಸೋನು ಭಟ್ ,ಸವಿತಾ ,ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು ,ಪೋಷಕರು, ಅಂಗನವಾಡಿ ಕಾರ್ಯಕರ್ತೆಯರಾದ ಯಮುನಾ, ಜಯಲಕ್ಷ್ಮಿ ಹಾಗೂ ಊರವರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಯಮುನಾ ಕಾರ್ಯಕ್ರಮ ನಿರ್ವಹಿಸಿದರು.