ಆಲೆಟ್ಟಿ ಆಶ್ರಮ ಶಾಲೆಗೆ ಭೇಟಿ ನೀಡಿದ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ- ಮಕ್ಕಳೊಂದಿಗೆ ಬಿಸಿಯೂಟ ಸವಿದ ಇ.ಒ

0

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ರವರು ಇಂದು ಆಲೆಟ್ಟಿ ವಾಲ್ಮೀಕಿ ಆಶ್ರಮ ಶಾಲೆಗೆ ಮತ್ತು ಕಾಂತಮಂಗಲದಲ್ಲಿರುವ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಶಾಲೆಯಲ್ಲಿ ಮಕ್ಕಳ ಜತೆ ಕಾಲ ಕಳೆದರು. ನಿಲಯದಲ್ಲಿನ ವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಿದರು. ಮಧ್ಯಾಹ್ನ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸೇವಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರು, ಮೇಲ್ವಿಚಾರಕರು ಹಾಗೂ ಸಿಬ್ಬಂದಿಯವರು ಜತೆಗಿದ್ದರು.