ಜಿಲ್ಲಾ ವೃತ್ತಿ ಶಿಕ್ಷಣ ಪ್ರದರ್ಶನ : ಗುತ್ತಿಗಾರು ಜೆ.ಒ.ಸಿ. ವಿಭಾಗಕ್ಕೆ ಪ್ರಶಸ್ತಿ

0

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜ. ೩೦ ರಂದು ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ವೃತ್ತಿ ಶಿಕ್ಷಣ ಪ್ರದರ್ಶನದಲ್ಲಿ ಭಾಗವಹಿಸಿದ ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವೃತ್ತಿ ಶಿಕ್ಷಣ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಹೊಲಿಗೆ ವಿಭಾಗದಲ್ಲಿ ಪ್ರಥಮ ಹಾಗೂ ಎಸ್.ಯು.ಪಿ.ಡಬ್ಲ್ಯೂ ವಿಭಾಗದಲ್ಲಿ ದ್ವಿತೀಯ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ .

ವೃತ್ತಿ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಚೂಡಾಮಣಿಯವರ ನೇತೃತ್ವದಲ್ಲಿ ವಿದ್ಯಾರ್ಥಿಗಳ ತಂಡ ಪ್ರದರ್ಶನದಲ್ಲಿ ಭಾಗವಹಿಸಿದ್ದು ರಾಜಮಟ್ಟಕ್ಕೆ ಆಯ್ಕೆಯಾಗಿದೆ.