ಐವರ್ನಾಡು ಗ್ರಾಮ ಪಂಚಾಯತ್ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಸಮಗ್ರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಐವರ್ನಾಡಿನ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರೆಗೆ ನಡೆಯಿತು.


ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು ,ಸದಸ್ಯರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಪಂಚಾಯತ್ ಸಿಬ್ಬಂದಿಗಳು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು,ಸಮಗ್ರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಐವರ್ನಾಡಿನ ಅಧ್ಯಕ್ಷರು,MBK, LCRP ಸದಸ್ಯರು,ಹಾಗೂ ಊರಿನ ಪ್ರಮುಖರು ಭಾಗವಹಿಸಿದರು.