ಜಾಲ್ಸೂರು (ಅಡ್ಕಾರು) ಶಾಲಾ ನೂತನ ಕೊಠಡಿ ಉದ್ಘಾಟನೆ

0

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ (ಅಡ್ಕಾರು) ಜಾಲ್ಸೂರು ಇಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಗಳ ಉದ್ಘಾಟನೆಯನ್ನು ಫೆ.3ರಂದು ಶಾಸಕಿ ಕು. ಭಾಗೀರಥಿ ಮುರುಳ್ಯ ನೆರವೇರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ವಹಿಸಿದ್ದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ತಿರುಮಲೇಶ್ವರಿ ಎ.ಎಲ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಸಂಧ್ಯಾ ಸಿ. ಆರ್. ಹಾಗೂ ಸಾವಿತ್ರಿ ಗೋಪಾಲ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಬಿ.ಈ. ಸಮನ್ವಯಾಧಿಕಾರಿಗಳಾದ ಶೀತಲ್ ಯು. ಕೆ., ಶಿಕ್ಷಣ ಸಂಯೋಜಕರಾದ ಸಂಧ್ಯಾಕುಮಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅಬ್ದುಲ್ ಮಜೀದ್, ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಜಯರಾಮ್ ರೈ, ಶಾಲಾ ಎಸ್. ಡಿ. ಎಂ. ಸಿ.ಅಧ್ಯಕ್ಷರಾದ ಮಹಮ್ಮದ್ ನೌಫಲ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ವಸಂತಿ ಯಂ. ಉಪಸ್ಥಿತರಿದ್ದರು.
ಸಭೆಯಲ್ಲಿ ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಎಸ್. ಡಿ. ಎಂ. ಸಿ. ಸದಸ್ಯರುಗಳು, ಪೋಷಕರು, ಶಿಕ್ಷಕರು, ಅಡುಗೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಪೂರ್ಣಿಮಾ ಎಂ ಎಂ ಕಾರ್ಯಕ್ರಮ ನಿರೂಪಿಸಿ, ದಿವ್ಯಾ ಬಿ. ವಂದನಾರ್ಪಣೆಗೈದರು.