ಸುಳ್ಯದ ಕೆ ಎಸ್ ಆರ್ ಟಿ ಸಿ ಯ ಮುಂಭಾಗ ರಸ್ತೆ ದಾಟುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ : ಮಹಿಳೆ ಮೃತ್ಯು

0

ಸುಳ್ಯ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿಯಾಗಿ ಮೃತಪಟ್ಟ ಘಟನೆ ಫೆ. 6 ರಂದು ರಾತ್ರಿ ಸಂಭವಿಸಿದೆ.

ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಲಾರಿ ಸುಳ್ಯದ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆಯಿತು. ಪರಿಣಾಮ ಮಹಿಳೆ ಸ್ಥಳದಲ್ಲಿಯೆ ಮೃತಪಟ್ಟರು.


ಮೃತ ದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅಂದಾಜು 40 ವರ್ಷ ಪ್ರಾಯದ ಮಹಿಳೆಯಾಗಿದ್ದು, ಗುರುತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.