ಸುಳ್ಯ : ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ

0


ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಿಂಗಳಾಡಿ ಮೂಲದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ತಿಂಗಳಾಡಿಯ ವಸಂತ ಎಂಬವರು ಚಿಕಿತ್ಸೆಗಾಗಿ ದಾಖಲಾಗಿದ್ದು, ಇಂದು ಮುಂಜಾನೆ ಆರು ಗಂಟೆಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಮೂಲತಃ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು ಪಿಟ್ಸ್ ಕಾಯಿಲೆಗೆ ಒಳಗಾಗುತ್ತಿದ್ದರು.


ಮೃತರು ಪತ್ನಿ ಗೀತಾ, ಪುತ್ರ ನಾಗೇಶ್, ಪುತ್ರಿಯರಾದ ನಳಿನಿ ಹಾಗೂ ನಯನರವರನ್ನು ಅಗಲಿದ್ದಾರೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ.