ಪಂಜ ಜಾತ್ರೆ: ಸಹಕಾರ ಸಂಘದ ವತಿಯಿಂದ ಶ್ರೀ ದೇವರಿಗೆ ಕಟ್ಟೆ ಪೂಜೆ

0

ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಫೆ.7. ರಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಜಳಕದಹೊಳೆ ಶಾಖೆಯ ಎದುರು ಶ್ರೀ ದೇವರಿಗೆ ಕಟ್ಟೆ ಪೂಜೆ ನಡೆಯಿತು.

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ರಘುನಾಥ ರೈ ಕೆರೆಕ್ಕೋಡಿ , ನಿರ್ದೇಶಕ ಚಂದ್ರಶೇಖರ ಶಾಸ್ತ್ರಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ, ಸಂಘದ ನಿರ್ದೇಶಕರು, ಸಿಬ್ಬಂದಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.