ಉಬರಡ್ಕ: ಶ್ರೀ ನರಸಿಂಹ ಶಾಸ್ತಾವು ಜಾತ್ರೋತ್ಸವ ಆಮಂತ್ರಣ ಬಿಡುಗಡೆ

0

ಉಬರಡ್ಕ ಮಿತ್ತೂರು ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಜಾತ್ರೋತ್ಸವ ಕಾರ್ಯಕ್ರಮವು ಮಾ.4 ರಿಂದ ನಡೆಯಲಿದ್ದು, ಜಾತ್ರೋತ್ಸವದ ಆಮಂತ್ರಣ ಬಿಡುಗಡೆಯು ಫೆ.10 ರಂದು ದೇವಾಲಯದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ರತ್ನಾಕರ ಗೌಡ ಬಳ್ಳಡ್ಕ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪಿ.ಎಸ್.ಗಂಗಾಧರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಅಮೈ, ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರು, ಜಾತ್ರೋತ್ಸವ ಸಮಿತಿ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.