ಬೊಳುಬೈಲು: ಸರಣಿ ಅಪಘಾತ

0

ಮಹಿಳೆಯ ಕಾಲಿಗೆ ಗಂಭೀರ ಗಾಯ ಮಂಗಳೂರಿನ ಆಸ್ಪತ್ರೆಗೆ ರವಾನೆ

ಎರಡು ಕಾರು ಹಾಗೂ ಬೈಕಿನ ಮಧ್ಯೆ ಸರಣಿ ಅಪಘಾತ ಸಂಭವಿಸಿ, ಬೈಕಿನಲ್ಲಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಜಾಲ್ಸೂರು ಗ್ರಾಮದ ಬೊಳುಬೈಲಿನಲ್ಲಿ ಫೆ.11ರಂದು ಸಂಜೆ ಸಂಭವಿಸಿದೆ.

ಸುನಿಲ್ ಕುಮಾರ್ ಮೋಂಟಡ್ಕ ಅವರು ಜಾಲ್ಸೂರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ವೇಳೆ ಮುಂಭಾಗದಲ್ಲಿ ಹೋಗುತ್ತಿದ್ದ ಕಾರೊಂದಕ್ಕೆ ಢಿಕ್ಕಿ ಹೊಡೆದು, ಅದರ ಮುಂದೆ ಹೋಗುತ್ತಿದ್ದ ಇನ್ನೊಂದು ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಮಗು ಸೇರಿದಂತೆ ದಂಪತಿಗಳ ಪೈಕಿ ಮಹಿಳೆಯ ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಸೇರಿ ಗಾಯಾಳು ಮಹಿಳೆಯನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದು, ಮಹಿಳೆಯ ಕಾಲು ಪ್ರಾಕ್ಚರ್ ಆಗಿದ್ದು, ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ, ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ.