ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ

0

ಸಮಿತಿಯ ಗೌರವಾಧ್ಯಕ್ಷರಾಗಿ ಡಿ.ವಿ. ಸದಾನಂದ ಗೌಡ, ಕುಂಟಾರು ರವೀಶ್ ತಂತ್ರಿ, ಅಧ್ಯಕ್ಷರಾಗಿ ಶಿವಪ್ರಸಾದ್ ಉಗ್ರಾಣಿಮನೆ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕಣೆಮರಡ್ಕ ಆಯ್ಕೆ

ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಇದೀಗ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದ್ದು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಭಾನುವಾರ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಮಾಜಿ ಮುಖ್ಯ ಮಂತ್ರಿ, ಸಂಸದ ಡಿ.ವಿ ಸದಾನಂದ ಗೌಡ ಹಾಗೂ ವೇದಮೂರ್ತಿ ಬ್ರಹ್ಮಶ್ರೀ ರವೀಶ ತಂತ್ರಿ ಆಯ್ಕೆಯಾದರು. ಸಮಿತಿಯ ಅಧ್ಯಕ್ಷರಾಗಿ ಶಿವಪ್ರಸಾದ್ ಉಗ್ರಾಣಿಮನೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕಣೆಮರಡ್ಕ ಆಯ್ಕೆಯಾದರು. ಉಳಿದಂತೆ ಇತರ ಪದಾಧಿಕಾರಿಗಳ ಆಯ್ಕೆಯೂ ನಡೆಯಿತಲ್ಲದೆ ಮುಂದಿನ ಎಪ್ರಿಲ್ ತಿಂಗಳಿನಿಂದ ಆರಂಭಗೊಂಡು ಮೇ 4 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ವಿಧಿವಿಧಾನಗಳ ಯಶಸ್ಸಿಗಾಗಿ ಸಮಿತಿಯ ಪದಾಧಿಕಾರಿಗಳು ಊರವರ ಸಹಕಾರದೊಂದಿಗೆ ಹಗಲಿರುಳೆನ್ನದೆ ಶ್ರಮಿಸಬೇಕೆಂದು ಕೋರಲಾಯಿತು.

ವೇದಿಕೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಪುಂಡರೀಕ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಣಿಯಾಣಿ ಕೇನಾಜೆ, ಮಹಿಳಾ ಅಧ್ಯಕ್ಷೆ ಮೋಹಿನಿ, ಕಣೆಮರಡ್ಕ ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪೂರ್ಣಚಂದ್ರ ಕಣೆಮರಡ್ಕ, ಮಂಡೆಕೋಲು ಗ್ರಾ.ಪಂ‌ ಅಧ್ಯಕ್ಷ ಕುಶಲ ಉದ್ದಂತಡ್ಕ ಮೊದಲಾದವರು ಉಪಸ್ಥಿತರಿದ್ದರು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುರೇಶ್ ಕಣೆಮರಡ್ಕ ವಂದಿಸಿದರು. ಶಿವಪ್ರಸಾದ್ ಉಗ್ರಾಣಿಮನೆ ಕಾರ್ಯಕ್ರಮ ನಿರೂಪಿಸಿದರು.