ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ

0

ದೇಶದ ಸಾರ್ವತ್ರಿಕ ಚುನಾವಣೆಯು ಸಮೀಪಿಸುತ್ತಿದ್ದು, ಅರಂತೋಡು ಗ್ರಾಮದ ಅಂಗಡಿಮಜಲು ಎಂಬಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಲಾಗಿದೆ.

ಬಹು ವರ್ಷಗಳ ಬೇಡಿಕೆಯಾದ ಅರಂತೋಡಿನಿಂದ ಅಂಗಡಿಮಜಲು – ಪಾರೆಮಜಲು , ಮಂಟಮೆಗುಡ್ಡೆ ಮೂಲಕ ಮರ್ಕಂಜಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಹೊಂಡ ಗುಂಡಿಗಳಿಂದ ಕೂಡಿದ್ದು, ಈ ರಸ್ತೆಯಲ್ಲಿ ಹೋಗಲಾಗದ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಅಭಿವೃದ್ಧಿ ಕೆಲಸ ಇನ್ನೂ ಆರಂಭಗೊಂಡಿಲ್ಲ. ಇದೀಗ ದೇಶದ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಪರಿಸರದಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್ ಕಂಡುಬಂದಿದೆ.