p>

ಕನಕಮಜಲು: ಪೆರುಂಬಾರು ಮದಿಮಾಳುಮುಖ ಶ್ರೀ ದುರ್ಗಾದೇವಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಹಸಿರುವಾಣಿ ಸಮರ್ಪಣೆ

0

ಕನಕಮಜಲು ಗ್ರಾಮದ ಪೆರುಂಬಾರು ಮದಿಮಾಳುಮುಖ ಶ್ರೀ ದುರ್ಗಾದೇವಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವು ಫೆ.13 ಮತ್ತು 14ರಂದು ಬ್ರಹ್ಮಶ್ರೀ ವೇ.ಮೂ. ಕೆಮ್ಮಿಂಜೆ ಸುಬ್ರಹ್ಮಣ್ಯ ಬಳ್ಳುಕ್ಕುರಾಯರ ನೇತೃತ್ವದಲ್ಲಿ ನಡೆಯಲಿದ್ದು, ಬ್ರಹ್ಮಕಲಶೋತ್ಸವಕ್ಕೆ ಫೆ.13ರಂದು ಬೆಳಿಗ್ಗೆ ಹಸಿರುವಾಣಿ ಸಮರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ಸಂಜೆ ಸ್ಥಳಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ಬಿಂಬಧಿವಾಸ ರಕ್ಷೆ ನಡೆಯಲಿದ್ದು, ನಾಳೆ ಬ್ರಹ್ಮಕಲಶೋತ್ಸವ ನಡೆಯಲಿದೆ.