ಮಾವಿನಕಟ್ಟೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕಾರಣಿಕ ಪ್ರಸಿದ್ಧ ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19ರಂದು ಶ್ರೀ ದೈವದ ಒತ್ತೆಕೋಲ ಮಹೋತ್ಸವವು‌ ನಡೆಯಲಿದ್ದು, ಆ ಪ್ರಯುಕ್ತ ಆಮಂತ್ರಣ ಪತ್ರ ಬಿಡುಗಡೆಯು ಇಂದು‌ ದೈವದ ಸಾನಿಧ್ಯದಲ್ಲಿ‌ ನಡೆಯಿತು‌‌.‌

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಮಾವಿನಕಟ್ಟೆ ಸೇರಿದಂತೆ ಸಮಿತಿಯ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.