ಎಡಮಂಗಲ ಜಾತ್ರೋತ್ಸವ ಆರಂಭ

0

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆರಂಭಗೊಂಡಿದೆ.ಫೆ.13 ರಂದು ರಾತ್ರಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧ್ವಜಾರೋಹಣ, ಬಲಿಹೊರಟು ಉತ್ಸವ, ಶ್ರೀರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀಹರಿ ನೂಚಿಲ, ವ್ಯವಸ್ಥಾಪನಾ ಸಮಿತಿ ಸದಸ್ಯರು, ವಿವಿಧ ಸಮಿತಿಯ ಸದಸ್ಯರು, ಊರವರು ಉಪಸ್ಥಿತರಿದ್ದರು.