ಕೊಡಿಯಾಲ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಪರ್ಮನೆಂಟ್ ಗ್ರಾಮ ಲೆಕ್ಕಾಧಿಕಾರಿ, ಪಿಡಿಒ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

ಕೊಡಿಯಾಲ ಗ್ರಾಮ ಪಂಚಾಯತ್ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಹರ್ಷನ್ ಕೆ.ಟಿಯವರ ಅಧ್ಯಕ್ಷತೆಯಲ್ಲಿ ಫೆ.14 ರಂದು ಕೊಡಿಯಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಸುಳ್ಯ ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕಾ ಅಧಿಕಾರಿ ಅರಬಣ್ಣ ಪೂಜೇರಿ ನೋಡೆಲ್ ಅಧಿಕಾರಿಯಾಗಿದ್ದರು.


ಪಿಡಿಒ ಪ್ರವೀಣ್ ಕುಮಾರ್ ಸಿ.ವಿ.ಸ್ವಾಗತಿಸಿ,ಪಂಚಾಯತ್ ಸಿಬ್ಬಂದಿ ಹರಿಣಿಯವರು ವರದಿ ಮಂಡಿಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಚಿತ್ರಾ ಹಾಗೂ ಸದಸ್ಯರು ಮತ್ತು ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು.